ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವೀಡಿಯೋ ವೈರಲ್;‌ ಎಂಟು ಮಂದಿ ಸೆರೆ

0
312

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು  ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್​​ನಲ್ಲಿ ದುಷ್ಕೃತ್ಯ ನಡೆದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಅತ್ಯಾಚಾರವೆಸಗಿದ ಮತ್ತು ವಿಡಿಯೋ ವೈರಲ್​ ಮಾಡಿದ್ದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಡೆದ್ದೇನು?

ಓರ್ವ ಆರೋಪಿ ಇನ್​ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಒಬ್ಬನಿಂದ ಅತ್ಯಾಚಾರವೆಸಗಿದ್ದು, ಮತ್ತೋರ್ವ ಆರೋಪಿ ವಿಡಿಯೋ ಮಾಡಿದ್ದ. ನಂತರ ಅತ್ಯಾಚಾರದ ವಿಡಿಯೋವನ್ನು ದುಷ್ಕರ್ಮಿಗಳು ಸ್ನೇಹಿತರಿಗೆ ಕಳುಹಿಸಿದ್ದರು. ಆರೋಪಿಯ ಸ್ನೇಹಿತರು ಅತ್ಯಾಚಾರ ವಿಡಿಯೋವನ್ನು ವೈರಲ್ ಮಾಡಿದ್ದರು. ಸದ್ಯ ಗ್ಯಾಂಗ್​ರೇಪ್ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here