ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಸೆ.7 ರವಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಭಜನೆ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಪೂಜೆ, 12.30ಕ್ಕೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ: ಸಂಘದ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳು ಅಂಕ ಪಟ್ಟಿ ಮತ್ತು ಆಧಾರ್ ಪ್ರತಿಯೊಂದಿಗೆ ಪ್ರಸಕ್ತ ಕಲಿಯುತ್ತಿರುವ ತರಗತಿ/ಕೋರ್ಸ್ ವಿವರದೊಂದಿಗೆ ಸೆ.6ರ ಸಂಜೆಯೊಳಗೆ ಸಂಘದ ಆಡಳಿತ ಸಮಿತಿಗೆ ಅರ್ಜಿಯನ್ನು ಸಲ್ಲಿಸಬೇಕಾಗಿ ಪ್ರಕಟಣೆ ತಿಳಿಸಿದೆ.

