ಮೂಡುಬಿದಿರೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಾಳೆ ಶಿಕ್ಷಕರ ದಿನಾಚರಣೆ

0
155

ವರದಿ ರಾಯಿ ರಾಜಕುಮಾರ ಮೂಡುಬಿದಿರೆ

ಮೂಡುಬಿದಿರೆ ಶಿಕ್ಷಕರ ದಿನಾಚರಣೆ ಸಮಿತಿಯಿಂದ ನಾಳೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಡಾ . ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ಶಿಕ್ಷಕರ ದಿನಾಚರಣೆ ನಡೆಯಲಿದೆ. ಸರಕಾರದ ಸಚಿವರುಗಳು, ಶಾಸಕರುಗಳು, ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಹಾಗೂ ಸ್ಥಳೀಯ ಮಾಜಿ ಸಚಿವರು ಹಾಗೂ ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ದಿಕ್ಸೂಚಿ ಭಾಷಣಕಾರರಾಗಿ ನಿವೃತ್ತ ಉಪನ್ಯಾಸಕ ಡಾ ಪುಂಡಿಕೈ ಗಣಪಯ್ಯ ಭಟ್ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಸನ್ಮಾನ ಪಡೆಯಲಿರುವ ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ಹಿಂದಿನ ವರ್ಷ ಜಿಲ್ಲಾ ಮತ್ತು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರುಗಳ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋಗ ಇರಲಿದೆ ಎಂದು ಶಿಕ್ಷಕ ದಿನಾಚರಣೆ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here