ಶಿವಮೊಗ್ಗ: ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಶಿವಮೊಗ್ಗದ ಮಲವಗೊಪ್ಪದ ಬಳಿ ಬೈಕ್ ಅಪಘಾತ ಸಂಭವಿಸಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುವ ವೇಳೆ ಈ ಆಫಘಾತ ಸಂಭವಿಸಿದೆ. ಇನ್ನೊಂದು ಬೈಕ್‌ನಲ್ಲಿ ಹೆಚ್ಚು ಲಗೇಜ್ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ಗುದ್ದಿದ್ದಾನೆ.
ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಬಳಿಕ ಹಿಂದೆ ಇದ್ದ ಸಿಟಿ ಬಸ್ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳಿಗೆ ವಿವಾಹ ನಿಶ್ಚಯ ಆಗಿದ್ದು, 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು. ಆದರೆ, ದುರಾದೃಷ್ಟವಶಾತ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಹಿಂದೆ ಇಂತಹ ಹಲವು ಘಟನೆಗಳು ಸಹ ನಡೆದಿವೆ. ಕೆಲ ವಾಹನ ಸವಾರರ ನಿರ್ಲಕ್ಷ್ಯದಿಂದ ಅಪಘಾತ ಪ್ರಕರಣಗಳು ಸಂಭವಿಸುತ್ತಲಿವೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹಲವು ಜಾಗೃತಿ ಕ್ರಮಗಳನ್ನು ಕೈಗೊಂಡರೂ ಕೆಲ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಟನೆ ಮಾಡಿ ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚೆಗಷ್ಟೇ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ನಿನ್ನೆಷ್ಟೇ ಚಾರ್ಮಾಡಿ ಘಾಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿತ್ತು.

