ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಿ, ಅನುಗ್ರಹ ಪ್ರಸಾದ ನೀಡಿದರು. ಶ್ರೀ ಕ್ಷೇತ್ರದ ವತಿಯಿಂದ ಶ್ರೀಗಳಿಗೆ ಸಾಂಪ್ರದಾಯಿಕ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

