ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಪದವಿ ಪೂರ್ವ ಕಾಲೇಜು ಇಲ್ಲಿಯ ಜನತಾ ಕ್ರೀಡಾoಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.