ಕೊಲ್ಲೂರು ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ

0
21

ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕೊಲ್ಲೂರು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜು ಬಾಲಕ – ಬಾಲಕಿಯರ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ಧತೆಯನ್ನು ಮಕ್ಕಳಿಗೆ ತಿಳಿಸಿದರು ಹಾಗೂ ಕಠಿಣ ಪರಿಶ್ರಮ, ಬದ್ಧತೆ ಮತ್ತು ಆತ್ಮ ವಿಶ್ವಾಸದಿಂದ ಯಾವುದೇ ಅಸಾಧ್ಯವನ್ನು ಸಾಧಿಸಿ ತೋರಿಸಬಹುದೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಸುರೇಂದ್ರ ಶೆಟ್ಟಿ ವಹಿಸಿ ಮಾತನಾಡಿ, ಸದೃಢ ಮನಸ್ಸು ಏಕಾಗ್ರತೆಯಿಂದ ನೆಟ್ ಬಾಲ್ ಪಂದ್ಯಾಟವನ್ನು ಜಯಿಸಬಹುದೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕರಾದ ಪ್ರಶಾಂತ್ ಕುಮಾರ್ ಶೆಟ್ಟಿ , ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಹಾಲಿಂಗ ನಾಯ್ಕ, ಸುಧಾ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಸನ್ನ ಶರ್ಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ವಿಶೇಷ ವೀಕ್ಷಕರಾದ ಕೃಷ್ಣ ಮೋಗವೀರ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ , ಉಡುಪಿ ಜಿಲ್ಲಾ ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಖಜಾಂಚಿ ಅವಿನಾಶ ಆಚಾರ್ಯ, ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ‌.ಬಿ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಸಂಗೀತಾ ಶೆಟ್ಟಿ ನಿರೂಪಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ರಾಮ ನಾಯ್ಕ ಕೆ.ಬಿ ವಂದಿಸಿದರು.

LEAVE A REPLY

Please enter your comment!
Please enter your name here