ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಮಿಂಚಿ ಕೀರ್ತಿ ತರಲಿ: ಯಶ್ ಪಾಲ್ ಸುವರ್ಣ

0
13

ಉಡುಪಿ : ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅವರ ತವರು ಜಿಲ್ಲೆಗಳ ಗೌರವ ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಬಹುಮಾನ ವಿತರಿಸಿ ಅವರು ಮಾತನಾಡಿದರು.

ವಿವಿಧ ಜಿಲ್ಲೆಗಳಿಂದ ಉಡುಪಿಗೆ ಆಗಮಿಸುವ ಕ್ರೀಡಾಳುಗಳಿಗೆ ಜಿಲ್ಲೆಯ ಪ್ರೋತ್ಸಾಹವಿದೆ. ಕ್ರೀಡಾಂಗಣದ ಸೌಲಭ್ಯಗಳನ್ನು ಉಪಯೋಗಿಸಿ ದೇಶ ವಿದೇಶಗಳಲ್ಲಿ ಹೆಸರು ಮಾಡಲಿ ಎಂದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಹರಿಪ್ರಸಾದ್ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ ರೋಷನ್ ಶೆಟ್ಟಿ, ವಿವಿಧ ಜಿಲ್ಲೆಗಳ ಕ್ರೀಡಾ ಸಂಚಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here