ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯೋಜಿಸಿರುವ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ವಿವಿಧ ಕ್ರೀಡಾ ಪಂದ್ಯಾಟಗಳು ನಡೆಯುತ್ತಿದ್ದು, ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ 35 ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ 41 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕ್ರೀಡಾ ಸಾಧನೆ ಮೆರೆದಿದ್ದರು.