ಸೆ.20 : ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ

0
127

ಮಂಗಳೂರು : ದಸರಾ ಬಹುಭಾಷಾ ಕವಿಗೋಷ್ಠಿಯು  ಸೆ. 20ರ ಶನಿವಾರ ಅಪರಾಹ್ನ 2.30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ  ತುಳು ಭವನದಲ್ಲಿ ನಡೆಯಲಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಐದನೇ  ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ. 

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ 13 ಭಾಷೆಗಳ  ಕವಿಗಳು ಕವಿತೆ ವಾಚಿಸಲಿದ್ದಾರೆ. ಬಹುಭಾಷಾ ಕವಿ ವಿಲ್ಸನ್ ಕಟೀಲು  ಅವರು ಕವಿಗೋಷ್ಠಿಯನ್ನು ಉದ್ಘಾಟಿಸುವರು . ಹಿರಿಯ ಪ್ರರ್ತಕರ್ತರು ಹಾಗೂ ಸಾಹಿತಿ ಮಲಾರ್ ಜಯರಾಮ್ ರೈ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು . ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ. ಶೆಟ್ಟಿ ಮುಂಬಯಿ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲ ತೇಜೋಮಯ  ಮುಖ್ಯ ಅತಿಥಿಯಾಗಿ ಭಾಗವಹಿಸುವರು .

ಚೆನ್ನಪ್ಪ ಅಳಿಕೆ  (ತುಳು), ಮಂಜುಳಾ ಶೆಟ್ಟಿ (ತುಳು) , ಸತೀಶ್ ಪಡುಬಿದ್ರಿ (ಕೊರಗ ಭಾಷೆ), ಸದಾನಂದ ನಾರಾವಿ (ಕನ್ನಡ), ಕವಿತಾ ಅಡೂರು (ಶಿವಳ್ಳಿ ತುಳು ) , ರತ್ನಾ ಕೆ ಭಟ್ ತಲಂಜೇರಿ (ಹವ್ಯಕ ಕನ್ನಡ), ಕರುಣಾಕರ್ ಬಳ್ಕೂರು ( ಕುಂದಗನ್ನಡ) ಶಮೀಮಾ ಕುತ್ತಾರ್ ( ಬ್ಯಾರಿ), ಉದಯ ಭಾಸ್ಕರ್ (ಅರೆಭಾಷೆ), ಡಾ. ಮೀನಾಕ್ಷಿ ರಾಮಚಂದ್ರ (ಮಲೆಯಾಳಂ), ಬಾಲಕೃಷ್ಣ ಬೇರಿಕೆ (ಮರಾಠಿ) ರಾಧಿಕಾ ಪೈ(ಕೊಂಕಣಿ) ಚಂದ್ರಕಾಂತ್ ಗೋರೆ( ಚಿತ್ಪಾವನಿ), ಮೀರಾ ಭಟ್ ( ಕರಾಡ)  ಅವರು ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.    

LEAVE A REPLY

Please enter your comment!
Please enter your name here