ಮಂಗಳೂರು : ಹಿರಿಯ ಇತಿಹಾಸ ತಜ್ಞ ತುಳುನಾಡಿನ ಬಗ್ಗೆ ಹಾಗೂ ಕರಾವಳಿ ಕರ್ನಾಟಕದ ಬಗ್ಗೆ ಆಳವಾದ ಅಧ್ಯಯನ ನಡೆಸಿ ಅನೇಕ ಮೌಲಿಕ ಗ್ರಂಥಗಳನ್ನು ಪ್ರಕಟಿಸಿರುವ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2003 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರು ಹಾಗೂ ದೇಶ ವಿದೇಶಗಳ ಅನೇಕ ಗೌರವಗಳಿಗೆ ಪಾತ್ರರಾಗಿದ್ದ ಡಾ.ಕೆ.ಜಿ. ವಸಂತ ಮಾಧವ ಅವರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಸಂತಾಪ ವ್ಯಕ್ತಪಡಿಸಿದ್ದಾರೆ.
