ಡಾ. ರಂಜನ್ ಪೈ ಅವರಿಗೆ ಮಾಹೆಯ ಕಚೇರಿಯಲ್ಲಿ ಭೇಟಿ ನೀಡಿ ಪರ್ಯಾಯ ಮಹೋತ್ಸವಕ್ಕೆ ಆಮಂತ್ರಣ

0
53

2026 ಜನವರಿ 18 ರಂದು ಶೀರೂರು ಪರ್ಯಾಯ ನಡೆಯಲಿದ್ದು ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡುವ ಪರ್ಯಾಯ ಮಹೋತ್ಸವದ ಅಂಗವಾಗಿ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಗುಂಪಿನ ಮುಖ್ಯಸ್ಥರು ಮತ್ತು MAHE ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಂಜನ್ ಪೈ ಅವರನ್ನು ಮಣಿಪಾಲದ ಮಾಹೆಯ ಅವರ ಕಚೇರಿಯಲ್ಲಿ ಭೇಟಿ ನೀಡಿ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿ ತಮ್ಮ ಸಂಸ್ಥೆಯಿಂದ ಸಂಪೂರ್ಣ ಸಹಕಾರವನ್ನು ನೀಡಬೇಕಾಗಿ ಕೋರಲಾಯಿತು ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ ಉದಯಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮತಿಯ ಅಧ್ಯಕ್ಷರು ಹಾಗೂ ಶಾಸಕರೂ ಆದ ಶ್ರೀಯುತರಾದ ಯಶ್ ಪಾಲ್ ಸುವರ್ಣ,ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾರ್ಯದರ್ಶಿಗಳಾದ ಮೋಹನ್ ಭಟ್, ಕೋಶಾದಿಕಾರಿಗಳಾದ ಜಯಪ್ರಕಾಶ್ ಕೆದ್ಲಾಯ ಹಾಗೂಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಕುಲಾಧಿಪತಿಗಳಾದ ಹೆಚ್ ಎಸ್ ಬಲ್ಲಾಲ್ ಈ ಸಂಧರ್ಭದಲ್ಲಿ  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here