ಕಾವಲಕಟ್ಟೆ: ರಾ. ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, ಕಟ್ಟೆ ನಿವಾಸಿ ರಾಜೇಶ್ ಮೃತ್ಯು

0
312

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಲಕಟ್ಟೆ ಬಳಿಯ ಎನ್.ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ರಾಜೇಶ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ದಾರಿ ಮಧ್ಯೆ ಅವರು ಮೃತಪಟ್ಟರು ಎನ್ನಲಾಗಿದೆ . ಘಟನೆಯ ತೀವ್ರತೆಗೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಪುಂಜಾಲಕಟ್ಟೆ ಎಸ್‌ಐ ರಾಜೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here