ಬನ್ನಡ್ಕ ಶಾರದೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

0
195

ಮೂಡುಬಿದಿರೆ: ಸಾರ್ವಜನಿಕ ಶ್ರೀ ಶಾರದೋತ್ಸವ ಟ್ರಸ್ಟ್‌ (ರಿ.) ಬನ್ನಡ್ಕ ವತಿಯಿಂದ 4ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು(ಸೆ.21) ಭಾನುವಾರ ಅಲಂಗಾರು ಶ್ರೀಮಹಾಲಿಂಗೇಶ್ವರ ದೇವಳದ ಅರ್ಚಕ ಸುಬ್ರಮಣ್ಯ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.

ಬನ್ನಡ್ಕ ಶ್ರೀ ಶಾರದೋತ್ಸವ ಟ್ರಸ್ಟ್ ಅಧ್ಯಕ್ಷ ದಯಾನಂದ್ ಪೈ ಅಧ್ಯಕ್ಷತೆ ವಹಿಸಿದರು. ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಬೆಳುವಾಯಿ ಗ್ರಾಪಂ ಸದಸ್ಯ ಭರತ್ ಶೆಟ್ಟಿ ಜೈನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ಯಾಮ್ ಪ್ರಸಾದ್, ಸರ್ವೋದಯ ಫ್ರೆಂಡ್ಸ್ ಮೂಡುಬಿದಿರೆಯ ಅಧ್ಯಕ್ಷ ಗುರು, ಪ್ರಮುಖರಾದ ಸತೀಶ್ ಭಟ್, ಸಂಧ್ಯಾ ಸಂದೀಪ್, ಪ್ರೀಕ್ಷಾ, ನಿತಿನ್, ಶಾರದೋತ್ಸವದ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೂರಜ್ ಮಾರ್ನಾಡು, ಕೋಶಾಧಿಕಾರಿ ಸಂತೋಷ್ ನಾಯಕ್, ಸಾಂಸ್ಕೃತಿಕ ಉತ್ಸವದ ಸಂಚಾಲಕರಾದ ಮಹೇಶ್ ಹುಲೇಕಲ್, ಸುಕುಮಾ‌ರ್ ಬನ್ನಡ್ಕ ಉಪಸ್ಥಿತರಿದ್ದರು. ಪ್ರಸನ್ನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here