ಬೆಳ್ತಂಗಡಿ: ಟಿಪ್ಪರ್‌ ಡಿಕ್ಕಿ – ಕಾರು ಚಾಲಕ ಗಂಭೀರ

0
133

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಟಿಪ್ಪ‌ರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅತೀ ವೇಗದ ಚಾಲನೆಯಿಂದಾಗಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here