ಮೂಡುಬಿದಿರೆ: ವಜ್ರ ಮಹೋತ್ಸವ ವರ್ಷದ ಸಂಭ್ರಮಾಚರಣೆಯಲ್ಲಿರುವ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಸೆ. 22 ರಿಂದ ಸೆ. 27ರವರೆಗೆ ಒಂದು ವಾರದ ಎಐ ಮತ್ತುಕೋಡಿಂಗ್ ಬೂಟ್ ಶಿಬಿರ ಆಯೋಜಿಸಲಾಯಿತು. ಈ ಶಿಬಿರವನ್ನು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಸಲಾಯಿತು.
ಈ ಸಮಾರೋಪ ಕಾರ್ಯಕ್ರಮಕ್ಕೆ, ಮುಖ್ಯ ಅತಿಥಿಗಳಾದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ, ಮೋಹನದಾಸ್ ಶೆಣೈ ಪಿ. ಅವರು ಕಾರ್ಯಕ್ರಮವನ್ನು ಉದ್ಧೇಶಿಸಿ “ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳಬೇಕು, ಇಂತಹ ಅರ್ಥಪೂರ್ಣವಾದ ಕಾರ್ಯಕ್ರಮಗಳು ಇನ್ನು ಹೆಚ್ಚು ನಡೆಯಬೇಕು, ಮುಂದೆಕೂಡ ನಮ್ಮ ಬೆಂಬಲ ಹೀಗೆ ಇರುತ್ತದೆ, ಮಹಾವೀರ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ತುಂಬಾ ಸಂತಸ ತಂದಿದೆ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಬಿಸಿಎ ವಿಭಾಗದಲಿ ಪ್ರಥಮ ಶ್ರೇಣಿದಾರರು, ಟಿಕಾಂಗಾ ಕಂಪನಿ ಪ್ರೈ. ಲಿಮಿಟೆಡ್, ಉದ್ಯೋಗಿ, ಶ್ರೀರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿ “ಇಂದಿನ ತಂತ್ರಜ್ಞಾನಯುಗದಲ್ಲಿ ಎಐ ಮತ್ತುಕೋಡಿಂಗ್ ಎಷ್ಟು ಮಹತ್ವದ್ದಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಎಐ ಎಷ್ಟು ಮುಖ್ಯ ಇಂತಹ ಕಾಲೇಜಿನಲ್ಲಿ ಓದಿರುವುದು ನನಗೆ ಹೆಮ್ಮೆಯ ವಿಷಯ ಎಂದು ಸಂತಸ ವ್ಯಕ್ತ ಪಡಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ, ಸಂಪತ್ ಸಾಮ್ರಾಜ್ಯ ಮಾತನಾಡಿ“ ಇಂದಿನ ಯುಗದಲ್ಲಿ ತಂತ್ರಜ್ಞಾನಗಳನ್ನು ಎಲ್ಲಾಕಡೆಯಲ್ಲು ಬಳಕೆ ಮಾಡಲಾಗುತ್ತಿದೆ. ಅದ್ದರಿಂದ ಎಐ ಅಂತಹ ತಂತ್ರಜ್ಞಾನಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಬೇಕು” ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದಒಂದು ವಾರದ ಶಿಬಿರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು ಹಾಗೂ ಒಂದು ವಾರದ ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನವನ್ನುಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ, ಸಂಪತ್ ಸಾಮ್ರಾಜ್ಯವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ, ಡಾ. ಮುರಳಿ ಕೃಷ್ಣ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪದವಿಪೂರ್ವಕಾಲೇಜಿನ ಪ್ರಾಂಶುಪಾಲೆ ಲೆ. ವಿಜಯಲಕ್ಷ್ಮೀ, ಕಾರ್ಯಕ್ರಮ ಸಂಯೋಜಕಿ ಗಣಕ ಶಾಸ್ತ್ರ ಉಪನ್ಯಾಸಕಿ ಕೀರ್ತಲಾ, ವಿಭಾಗ ಮುಖ್ಯಸ್ಥ ಸಂದೀಪ್, ಕೋಡಿಂಗ್ಕ್ಲಬ್ ವಿದ್ಯಾರ್ಥಿ ಪ್ರತಿನಿಧಿ ಕುಶಾಗ್ರ, ಹಾಗೂ ವಿವಿಧ ಪ್ರೌಢಶಾಲೆಯ ಅಧ್ಯಪಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಸ್ವಾಗತಿಸಿ, ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಂದೀಪ್ ವಂದಿಸಿದರು, ಕಾರ್ಯಕ್ರಮವನ್ನು ಭವ್ಯ ಪ್ರಥಮ ಬಿ.ಸಿ.ಎ ನಿರೂಪಿಸಿದರು.

