ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ವತಿಯಿಂದ ಸೋಮವಾರ ಆರಂಭಗೊAಡ 7 ನೇ ವರ್ಷದ ‘ಸಿದ್ಧಕಟ್ಟೆ ದಸರಾ’ ಕಾರ್ಯಕ್ರಮ ಸೆ.೩೦ರಂದು ಮಂಗಳವಾರ ಸಂಜೆ 6 ಗಂಟೆಗೆ ಆಕರ್ಶಕ ಶೋಭಾಯಾತ್ರೆ ಮೂಲಕ ಸ್ಥಳೀಯ ಪುಚ್ಚಮೊಗರು ಫಲ್ಗುಣಿ ನದಿಯಲ್ಲಿ ವಿಸರ್ಜಣೆಗೊಳ್ಳಲಿದೆ.
ಅಂದು ಮಧ್ಯಾಹ್ನ 11 ಗಂಟೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಧಾರ್ಮಿಕ ಭಾಷಣ ಮಾಡುವರು. ವಿಧಾನಪರಿಷತ್ ಸದಸ್ಯ ಬಿ.ಮಂಜುನಾಥ ಭಂಡಾರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಾಂಕರ ಶೆಟ್ಟಿ ಬಡಾಜೆ, ಸುಬ್ರಹ್ಮಣ್ಯ ಕ್ಷೇತ್ರದ ಅಧ್ಯಕ್ಷ ಹರೀಶ ಇಂಜಾಡಿ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ದೇವರಿಗೆ ಮಹಾಪೂಜೆ ಮತ್ತು ಸಾಔಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
