ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಶರನ್ನವರಾತ್ರಿಯ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಂಗಳವಾರ ಸಂಜೆ ಮಂಜೇಶ್ವರ ನಾಟ್ಯ ನಿಲಯಂ ಶಿಷ್ಯೆಯರಿಂದ ಭರತನಾಟ್ಯ ಮತ್ತು ಕೂಚುಪುಡಿ ಮತ್ತು ಜಾನಪದ ನೃತ್ಯ ಹಾಗೂ ಮಂಗಳೂರು ಗಣೇಶ್ ರಾವ್ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ, ಮಂಗಳೂರು ಮಾಜೀ ಮೇಯರ್ ಶಶಿಧರ್ ಹೆಗ್ಡೆ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು
ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಣಾಧಿಕಾರಿ ಶ್ವೇತಾ ಪಳ್ಳಿ, ಮುಲ್ಕಿ ನಗರ ಪಂಚಾಯತ್ ಸದಸ್ಯ ಬಾಲಚಂದ್ರ ಕಾಮತ್, ಚರಣ್ ಕೊಳಚಿ ಕಂಬಳ, ಧರ್ಮಾನಂದ ಶೆಟ್ಟಿಗಾರ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್, ಕಾರ್ತಿಕ್ ಕೋಟ್ಯಾನ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಲಕ್ಷ್ಮಿಕಾಂತ್ ರಾವ್ ನಿರೂಪಿಸಿದರು .