ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’

0
25

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’ವು ಅ.3 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಎರಡೂ ಕಾರ್ಯಕ್ರಮಗಳಲ್ಲಿ ಪಕ್ಷದ ಹಿರಿಯರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಅಗತ್ಯವಾಗಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here