ಸೇವಾ ಪಕ್ಷೀಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

0
22

ಕಾರ್ಕಳ : ಸೇವಾ ಪಾಕ್ಷಿಕದ ಅಂಗವಾಗಿ ಇಂದು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ, ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಮಾನ್ಯ ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್ ಭಾರತಾಂಬೆಗೆ ಪುಷ್ಪಾರ್ಚನೆ ಗೈದು, ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಕಾರ್ಕಳ ಮಂಡಲ ಬಿಜೆಪಿಯ ಅಧ್ಯಕ್ಷರಾದ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಮಹಾವೀರ್ ಹೆಗ್ಡೆ, ಕೆ .ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಚಿತಾ ಶೆಣೈ ಪಾಲ್ಗೊಂಡಿದ್ದರು.

ಈ ಶಿಬಿರದಲ್ಲಿ 250 ಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಿಸಿಕೊಂಡರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಜೊತೆಗೆ ಕಣ್ಣಿನ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚರ್ಮರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು (ENT) ಹಾಗೂ ಇಸಿಜಿ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ಸೇವೆ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್, “ಸೇವಾ ಪಕ್ಷೀಕೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಸೇವೆಗೆ ತೊಡಗಿರುವುದು ಪ್ರಶಂಸನೀಯ. ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ್ ಡಿ. ಬಂಗೇರ, ಮಿಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ರಜತ್ ಮುಡಾರು, ಮೂಡಾರು ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಸಾಲಿಯಾನ್, ಮಿಯಾರು, ಗ್ರಾಮ ಸಮಿತಿ ಅಧ್ಯಕ್ಷರು ಶರಣ್ ಕೆ ಶೆಟ್ಟಿ, ನಲ್ಲೂರು ಗ್ರಾಮ ಸಮಿತಿ ಅಧ್ಯಕ್ಷರಾದ ಪವನ್ ಜೈನ್, ಮಾಳ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here