
ನೆರಿಯ, ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು. ಕಿರಣ್ ಚಂದ್ರ ಡಿ ಪುಷ್ಪಗಿರಿಯವರ, ಟೀಂ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ತುರ್ತಾಗಿ ಬೇಟಿ ನೀಡಿ, ಕಿರಣ್ ಚಂದ್ರ ಪುಷ್ಪಗಿರಿಯವರ ಸಲಹೆ ಮೇರೆಗೆ ಮನೆ ಪುನರ್ನಿರ್ಮಾಣ ಕಾರ್ಯಕ್ಕೆ 25 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು. ಹಾಗೂ ಈ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಮನೆಯ ದುರಸ್ತಿ ಕಾರ್ಯಕ್ಕೆ ಇನ್ನಷ್ಟು, ಆರ್ಥಿಕವಾಗಿ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷರಾದ ಬಾಬು ಗೌಡ ನೆರಿಯ, ತೋಟತ್ತಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಓಬಯ್ಯ ಗೌಡ ಚಿಬಿದ್ರೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಭರತ್ ಹಾಗೂ ಊರಿನ ಹಲವಾರು ಗಣ್ಯರು ಉಪಸ್ಥಿತರಿದ್ದರು.
