ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್&2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗ್ರಾಮೀಣ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಕೆ. ರಾವೇಂದ್ರ ಉಪಾಧ್ಯಾಯ, ಜಿಲ್ಲಾ ಕನಕದಾಸ ಸೇವಾ ಸಂದ ನಿಕಟಪೂರ್ವ ಅಧ್ಯಕ್ಷ ಹನುಮಂತ ಆಡಿನ. ಗೋಪಾಲ್ ದೇವದುರ್ಗ ಉಪಸ್ಥಿತರಿದ್ದರು. ಸಾಹಿತಿ ಡಾ. ನಿಕೇತನ ಉಪನ್ಯಾಸ ನೀಡಿದರು. ವಾಲ್ಮೀಕಿ ಸಂದ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿದರು. ರಾವೇಂದ್ರ ಪ್ರಭು ನಿರೂಪಿಸಿದರು. ರಾಜೇಶ್ ಭಟ್ ವಂದಿಸಿದರು.