ಬಿಗ್‌ ಬಾಸ್‌ ಮನೆಗೆ ಬೀಗ: ಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳ ಸ್ಥಳಾಂತರ..!

0
83


ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಈಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದೆ.
ಬಿಗ್‍ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಸೀಜ್ ಆಗಿರುವ ಹಿನ್ನೆಲೆಯಲ್ಲಿ ರಾಮನಗರ ತಾಲೂಕಿನ ಬಿಡದಿಯ ಈಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದೆ.
ರೆಸಾರ್ಟ್ ನಲ್ಲಿದ್ರೂ ಸ್ಪರ್ಧಿಗಳಿಗೆ ನೋ ಟಿವಿ, ನೋ ಕಾಂಟ್ಯಾಕ್ಟ್. ಬಿಗ್ ಬಾಸ್ ತಂಡದಿಂದಲೇ ಸ್ಪರ್ಧಿಗಳಿಗೆ ಭದ್ರತೆ ಮತ್ತು ಆತಿಥ್ಯ ವಹಿಸಲಾಗಿದೆ. ಮೊಬೈಲ್ ಬಳಸದಂತೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾದ ಎರಡನೇ ವಾರಕ್ಕೆ ಸ್ ಬಿಗ್ ಬಾಸ್ ಹೌಸ್ ಬಂದ್ ಆಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ. ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಜನ್ -12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್ ಬಾಸ್ ಶೋ ಹಾಗೂ ಸೆಟ್ ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.

LEAVE A REPLY

Please enter your comment!
Please enter your name here