ಭಾರತೀಯ ವೈದ್ಯಕೀಯ ಸಂಘದ ನೂತನ ಅಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ಆಯ್ಕೆ

0
53

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ 2025-26 ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲೋಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತç ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿಯವರು ಅವಿರೋಧಯಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ತಾ: 17.10.2025 ರಂದು ನಗರದ ಐ.ಎಮ್.ಎ. ಸಭಾಂಗಣದಲ್ಲಿ ಜರಗಲಿದ್ದು, ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭುಯರವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿವಿಧಾನವನ್ನು ನೆರವೇರಿಸಲಿರುವರು.

ಬೆಂಗಳೂರು ಗ್ರಾಮಾಂತರ ಪ್ರದೇಶ ಕ್ಷೇತ್ರದ ಸಂಸದ ಹಾಗೂ ಮಾಜಿ ಜಯದೇವ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಿ. ಎನ್. ಮಂಜುನಾಥ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಐವನ್ ಡಿ’ಸೋಜಾ, ಎಮ್.ಎಲ್.ಸಿ. ಹಾಗೂ ಜಿಲ್ಲಾ ಶಸ್ತç ಚಿಕಿತ್ಸಕ ಹಾಗೂ ವೆನ್‌ಲಾಕ್ ಆಸ್ಪತ್ರೆಯ ಆಧೀಕ್ಷಕ ಡಾ. ಶಿವಪ್ರಕಾಶ್ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು. ಡಾ. ಪೂಜಾರಿಯವರು ನಿರ್ಗಮಿಸುವ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿ’ಸೋಜಾ ರವರಿಂದ ಅಧಿಕಾರವನ್ನು ಸ್ವೀಕರಿಸಲಿರುವರು.
ಡಾ. ಪ್ರಕಾಶ್ ಹರಿಶ್‌ಚಂದ್ರ, ಕಾರ್ಯದರ್ಶಿ ಡಾ. ಜೂಲಿಯನ್ ಸಲ್ಡಾನ್ಹ, ಕೋಶಾಧಿಕಾರಿಯಾಗಲಿರುವರು. ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ. ಪ್ರೇಮ ಡಿ’ಕುನ್ಹ ಅಧಿಕಾರ ವಹಿಸಲಿರುವರು.

ಡಾ. ಪೂಜಾರಿಯವರು ರಾಜ್ಯಮಟ್ಟದ ಡಾ. ಬಿ.ಸಿ. ರೋಯ್ ಪ್ರಶಸ್ತಿ ಹಾಗೂ ರಾಜ್ಯದ ಖ್ಯಾತ ಸುವರ್ಣ ದೃಶ್ಯ ಮಾಧ್ಯಮ ವಾಹಿನಿಯು ಪ್ರಸ್ತುತ ಪಡಿಸುವ ಹೆಲ್ತ್ ಕೇರ್ ಎಕ್ಸೆಲೆನ್ಸ್ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ. ಇದು ಅವರ ವೈದ್ಯಕೀಯ ಸಾಧನೆಗೆ ಸಾಕ್ಷಿ. ಭಾರತೀಯ ವೈದ್ಯಕೀಯ ಸಂಘವು ಸುಮಾರು 1,700 ಸದಸ್ಯರನ್ನು ಒಳಗೊಂಡಿದೆ.

(ಎಮ್. ವಿ. ಮಲ್ಯ)
ವರದಿಗಾರರು

LEAVE A REPLY

Please enter your comment!
Please enter your name here