ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ

0
78

ಗಂಗಾವತಿ: ನಗರದ ನಿವಾಸಿಯಾದ ಚನ್ನಬಸವ ಕೊಟಗಿಯವರು ಒಬ್ಬ ವರದಿಗಾರರಾಗಿ ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ೧೫ ವರ್ಷಗಳಿಂದ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಬೆಂಗಳೂರಿನ ಗ್ಲೋಬಲ್ ಎಂಟರ್‌ಪ್ರೈಸಸ್‌ ವತಿಯಿಂದ ರಾಷ್ಟ್ರೀಯ ಸಾಧಕ ಪ್ರಶಸ್ತಿ-2025 ನೀಡಲಾಗುತ್ತಿದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶಾಂತಾ ತಿಳಿಸಿದ್ದಾರೆ.
ಚನ್ನಬಸವ ಕೊಟಗಿಯವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸAಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯನಿರ್ವಹಿಸಿ, ಪ್ರಸ್ತುತ ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಹಾಗೂ ಭಾರತೀಯ ಜೀವ ವಿಮಾ ನಿಗಮದ ಏಜೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಇತ್ತೀಚೆಗೆ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇವರ ಈ ಸಾಧನೆಯನ್ನು ಗುರುತಿಸಿದ ಬೆಂಗಳೂರಿನ ಗ್ಲೋಬಲ್ ಎಂಟರ್‌ಪ್ರೆöÊಸಸ್‌ರವರು ಇವರಿಗೆ ಅಕ್ಟೋಬರ್-೧೩ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಟೌನ್‌ಹಾಲ್‌ನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಇವರಿಗೆ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕರು, ಕಲಾವಿದರು, ಪತ್ರಕರ್ತರು, ಸಾಹಿತಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here