ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಜನರಿಗೆ ನೀಡುವ ಕೌಶಲ್ಯ ತರಬೇತಿಗಳಲ್ಲಿ ಗೊಂಬೆಗಳನ್ನು ತಯಾರಿಸುವ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಸಂಸ್ಥೆ ಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ ಉದ್ಘಾಟಿಸಿ ಫಲಾನುಭವಿಗಳಿಗೆ ಅತ್ಯುತ್ತಮವಾದ ತರಬೇತಿ ನೀಡುವ ಜಿಲ್ಲಾ ಮಟ್ಟದ ತರಬೇತಿ ನೀಡುವವರು, ನಮ್ಮೊಂದಿಗಿದ್ದು, ತರಬೇತಿ ಸಂಪೂರ್ಣ ಸದುಪಯೋಗಪಡಿಸಿ ಕೊಳ್ಳುವಂತೆ ಹೇಳಿದರು. ಹಾಗೂ ರುಡ್ಸೆಟ್ ಸಂಸ್ಥೆಯಲ್ಲಿ ಕೃಷಿ, ಸೇವೆ, ಉತ್ಪನ್ನ ಹಾಗೂ ವಿದ್ಯಾಮಶೀಲತಾಭಿವೃದ್ಡಿ ತರಬೇತಿ ನೀಡುತ್ತಿದ್ದು ಗ್ರಾಮೀಣ ಪ್ರದೇಶದ ಜನರಿಗೆ ಸ್ವ ಉದ್ಯೋಗದಲ್ಲಿ ಆಸಕ್ತರಿರುವವರಿಗೆ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗ ನಡೆಸಲು ಅವಕಾಶವಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ವಿಶ್ವಕರ್ಮ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾರಾಣಿ.ಯು. ಕೇಂದ್ರ ಸರ್ಕಾರದ ಯೋಜನೆಯನ್ನ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮಾಹಿತಿ ನೀಡಿದರು. ಹಾಗೂ ಸರಕಾರದ ಯೋಜನೆಗಳು ಜನಸಾಮಾನ್ಯರಿಗಾಗಿ ರಚಿಸಲಾಗಿದೆ, ಯೋಜನೆಯ ಎಂದರು. ಫಲಾನುಭವಿಗಳು ತರಬೇತಿಯ ನ್ನು ಸದುಪಯೋಗ ಪಡೆದುಕೊಳ್ಳಬೇಕಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕಿ ಚೈತ್ರ . ಕೆ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು ಹಾಗು ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.