
ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಇವರ ಶಾಸಕರ ಅನುದಾನದಲ್ಲಿ ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಪಿಲ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆಯನ್ನು ನೆರವೇರಿಸಿದೆ.

- ಪಣಪಿಲ ಗ್ರಾಮದ ಆಯೆರೆಗುಡ್ಡೆ (ಬಿರ್ಮೆರಗುಂಡಿ) ಬಳಿ 60ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸೇತುವೆಗೆ ಶಿಲಾನ್ಯಾಸ
- ಪಣಪಿಲ ಗ್ರಾಮದ ಪಿಲಿಕುಡೇಲು ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿಗೆ ಶಿಲಾನ್ಯಾಸ.
- ಪಣಪಿಲ ಗ್ರಾಮದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದೂ ರುದ್ರಭೂಮಿ ಕಾಮಗಾರಿಯ ಉದ್ಘಾಟನೆ ನಡೆಯಿತು.