ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆ ತಾಲೂಕಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ ಮೂಡಮಾರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 11ರಿಂದ 17ರ ತನಕ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಈ ಶಿಬಿರವನ್ನು ಅಕ್ಟೋಬರ್ 11ರಂದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಶ್ರೀನಾಥ ಸುವರ್ಣ, ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಭಾಷ್ ಚಂದ್ರ ಚೌಟ, ಮುಖ್ಯ ಶಿಕ್ಷಕಿ ಜ್ಯೋತಿ ಡಿಸೋಜ, ವಿದ್ಯಾರ್ಥಿ ನಾಯಕಿ ಆತ್ಮೀ, ಶಿಬಿರಾಧಿಕಾರಿ ತೇಜಸ್ವಿ ಭಟ್ ಹಾಗೂ ಇತರರು ಹಾಜರಿದ್ದರು.