ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ “ನವ-ಸಂಕಲ್ಪ” ಕಾರ್ಯಗಾರವು ಹೊಟೇಲ್ ಮಯೂರ ಸಭಾಂಗಣದಲ್ಲಿ ಆದಿತ್ಯವಾರ ನಡೆಯಿತು.
ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಬೂತ್ ಮಟ್ಟದಲ್ಲಿ ಅಧ್ಯಕ್ಷರುಗಳು ಕಾಂಗ್ರೆಸ್ ಪಕ್ಷದ ಸೈನಿಕರಂತೆ ಕೆಲಸ ಮಾಡಿದಾಗ ಪಕ್ಷ ತಳಮಟ್ಟದಲ್ಲಿ ಸದೃಢವಾಗಲು ಸಾದ್ಯ ಎಂದರು.
ಹಿರಿಯ ಕಾಂಗ್ರೆಸ್ ನಾಯಕ ಶೇಖರ ಮಡಿವಾಳ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಅರಿತುಕೊಳ್ಳಲು ಇಂತಹಾ ಕಾರ್ಯಗಾರವನ್ನು ಸಂಘಟಿಸುವುದು ಅನಿವಾರ್ಯವಾಗಿದೆ, ಈ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹತ್ತರವಾದ ಹೆಜ್ಜೆಯಿಟ್ಟಿರುವುದು ಶ್ಲಾಘನೀಯ ಎಂದರು.
ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ಬ್ಲಾಕ್ ಮಟ್ಟದಲ್ಲಿ ಪಕ್ಷದ ಪರವಾಗಿ ಹಲವಾರು ಹೋರಾಟಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ, ಗ್ರಾಮೀಣ ಭಾಗಗಳಲ್ಲಿ ಬೂತ್ ಅದ್ಯಕ್ಷರುಗಳ ಕಾರ್ಯ ಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಲು ಈ ಕಾರ್ಯಗಾರ ಸಹಕಾರಿಯಾಗಿದ್ದು ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಪಕ್ಷ ಸಂಘಟನೆಯ ಕೆಲಸವನ್ನು ಮಾಡಬೇಕು ಎಂದು ಸೌಹಾರ್ದ ಗೀತೆಯನ್ನು ಹಾಡಿ ಶಿಬಿರಾರ್ಥಿಗಳನ್ನು ಹುರುದುಂಬಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾದ್ಯಕ್ಷರಾದ ಚಂದ್ರಶೇಖರ ಶೆಟ್ಟಿಯವರು ಸಾಮಾಜಿಕ ಜಾಲತಾಣದ ಉಪಯೋಗದ ಬಗ್ಗೆ ತಿಳಿಸಿಕೊಟ್ಟರು, ಇನ್ನೋರ್ವ ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿಯವರು ನಾಯಕತ್ವದ ಬಗ್ಗೆ ತರಬೇತಿ ಹಾಗೂ ಚಟುವಟಿಕೆಗಳನ್ನು ಮಾಡಿ ಕಾರ್ಯಗಾರ ನಡೆಸಿದರು.
ಕಾರ್ಯಗಾರದಲ್ಲಿ ಹೆಬ್ರಿ ಬ್ಲಾಕ್ ಅದ್ಯಕ್ಷ ಗೋಪಿನಾಥ್ ಭಟ್, ಮಾಜಿ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಗ್ಯಾರಂಟಿ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ, ಮಲ್ಲಿಕ್ ಅತ್ತೂರು, ಪ್ರಚಾರ ಸಮಿತಿಯ ಸುಪ್ರಿತ್ ಶೆಟ್ಟಿ, ದಿನಕರ್ ಶೆಟ್ಟಿ, ಕೆ.ಎಮ್. ಎಫ್. ನಿರ್ಧೇಶಕ ಸುಧಾಕರ್ ಶೆಟ್ಟಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬೂತ್ ಅಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು, ಮಂಜುನಾಥ್ ಜೋಗಿ ಸ್ವಾಗತಿಸಿ ಯೋಗೀಶ್ ಇನ್ನಾ ಧನ್ಯವಾದವಿತ್ತರು.