ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಇದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಬಂಧಿಸಲಾಗಿದ್ದು, ಈ ಮೂಲಕ ಗ್ಯಾಂಗ್ ರೇಪ್ ಪ್ರಕರಣವೊಂದು ತಪ್ಪಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಅಪ್ರಾಪ್ತ ಬಾಲಕಿಯರೊಂದಿಗೆ ಈ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎನ್ನುವುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಅಲ್ಲದೆ, ಸ್ಥಳದಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕೆಲವು ವಸ್ತುಗಳು ಸಹ ಪತ್ತೆಯಾಗಿವೆ. ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ಘಟನೆಯ ಎಲ್ಲ ವಿವರಗಳನ್ನು ಬಾಯಿಬಿಟ್ಟಿದ್ದಾರೆ.