ಗ್ರಾಮ ಪಂಚಾಯತ್, ಗಂಗೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ
ಶಿಶು ಅಭಿವೃದ್ಧಿ ಯೋಜನೆ, ಕುಂದಾಪುರ
ಮತ್ತು ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ,ಪೌಷ್ಟಿಕ ಆಹಾರ ಮಾಸಾಚರಣೆ ಇಂದು ಸೀತಾರಾಮಚಂದ್ರ ಸಭಾಭವನ, ಗಂಗೊಳ್ಳಿ ಸಂಭ್ರಮದಲ್ಲಿ ನಡೆಯಿತು
ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೀರಿ ಹಾಗೆ ಇಂದಿನ ಯುವಜನರು ಸಾಂಪ್ರದಾಯಿಕ ಪೌಷ್ಟಿಕಾಂಶದ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ನೆಲೆಯಲ್ಲಿ ಕೇಂದ್ರ ಸರ್ಕಾರ ಆಹಾರ ಕ್ರಮಗಳ ಅರಿವು ಮೂಡಿಸಲು ಪೋಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಯವರು ಮಾತನಾಡಿ ನಮ್ಮ ಹಿರಿಯರು ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಕೇವಲ ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯವಿದೆ ಎಂದರು.
ಟಿ. ಎಲ್. ಉಮೇಶ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕುಂದಾಪುರ ಮಾತನಾಡಿ ಸಾರ್ವಜನಿಕರಿಗೆ ಅಪೌಷ್ಟಿಕತೆ ರಕ್ತಹೀನತೆ ಬಗ್ಗೆ ಮಾಹಿತಿಯನ್ನು ನೀಡಲಾಯಿತು ಎಂದರು.
ಮಹಿಳೆಯರು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಂತರ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು.ಗರ್ಭಿಣಿಯರಿಗೆ ಸೀಮಂತಪೂಜೆ ನೆರವೇರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ಈ ಸಂದರ್ಭದಲ್ಲಿ ಶ್ಯಾಮಲಾ ಸಿ.ಕೆ. ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ಪ್ರಜ್ವಲ್ ಆರೋಗ್ಯ ಸಹಾಯಕರು, ತಬ್ರೇಜ್ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಗಂಗೊಳ್ಳಿ, ಶ್ರೀ ಕೃಷ್ಣ ಪೂಜಾರಿ ಅಧ್ಯಕ್ಷರು ರೋಟರಿ ಕ್ಲಬ್ ಗಂಗೊಳ್ಳಿ, ರಾಜೇಂದ್ರ ಸೇರಿಗಾರ್, ನಾಗರಾಜ್ ಖಾರ್ವಿ JCI ಗಂಗೊಳ್ಳಿ, ಸುಮಿತ್ರ ಜಿ, ಶ್ರೀಮತಿ ಪ್ರೇಮ ಮಂಜುನಾಥ್ ಕಾರ್ಯದರ್ಶಿ ಶ್ರೀ ಶಕ್ತಿ ಒಕ್ಕೂಟ ಉಡುಪಿ,ಮತ್ತು
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗಂಗೊಳ್ಳಿ, ವಲಯ ಗಂಗೊಳ್ಳಿ ಆಶಾ ಕಾರ್ಯಕರ್ತೆಯರು, ಗಂಗೊಳ್ಳಿ ವಲಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸ್ತ್ರೀ ಶಕ್ತಿ ಒಕ್ಕೂಟ, ಗಂಗೊಳ್ಳಿ,
ಅಧ್ಯಕ್ಷರು ಮತ್ತು ಸರ್ವಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಗಂಗೊಳ್ಳಿ, ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸಂಜೀವಿನಿ ಒಕ್ಕೂಟ ಗಂಗೊಳ್ಳಿ,
ವಲಯ ಮೇಲ್ವಿಚಾರಕರು ರೇಖಾ ಕೆ ಸ್ವಾಗತಿಸಿದರು. ಫಿಲೋಮಿನ ಫೆರ್ನಾಂಡಿಸ್ ನಿರೂಪಿಸಿ ವಂದಿಸಿದರು