ಉಡುಪಿ: ಮಂಗಳೂರಿನ ನಾಲ್ಕು ಮಂದಿಯ ತಂಡ ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದ ಪರಿಣಾಮ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ನೋಟ್ ಆಧಾರದಲ್ಲಿ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಲೇಡಿಕೋಶನ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ಅಭಿಷೇಕ್ ಆಚಾರ್ಯ ಇವರಿಂದ ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲಿಂ ಈ ನಾಲ್ಕು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದು, ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆೂೋಪಿಗಳ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಆದರೆ ಪೊಲೀಸರು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ. ಈ ನಾಲ್ಕು ಮಂದಿ ಅಭಿಷೆಕ್ನ ಅಶ್ಲೀಲ ಚಿತ್ರಗಳನ್ನು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದು, ಹಣಕ್ಕಾಗಿ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಎ. ನವೀನ್ ಆಚಾರ್ಯ, ಸುಬ್ರಹ್ಮಣ್ಯ ಆಚಾರ್ಯ, ಸಂಕೇಶ್ ಆಚಾರ್ಯ ಉಪಸ್ಥಿತರಿದ್ದರು

