ನ.15: ಕಡಂದಲೆ ವಿದ್ಯಾಗಿರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ- ಆಮಂತ್ರಣ ಪತ್ರಿಕೆ ಬಿಡುಗಡೆ

0
51

ಮೂಡುಬಿದಿರೆ: ಕಡಂದಲೆ ವಿದ್ಯಾಗಿರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 15, ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ. ಇದರ‌ ಪ್ರಯುಕ್ತ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಪೂರ್ವಭಾವಿ ಸಭೆಯಲ್ಲಿ ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ., SDMC ಅಧ್ಯಕ್ಷರಾದ ಸೀತಾರಾಮ್ ಸಾಲ್ಯಾನ್, ಉಪಾಧ್ಯಕ್ಷ ಪ್ರಣೀತಾ ನಾಗೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ ಸೇರಿದಂತೆ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ನವೆಂಬರ್ 15 ರಂದು ಬೆಳಗ್ಗೆ 9.30 ಧ್ವಜಾರೋಹಣ ಸಮಾರಂಭ, ಮಧ್ಯಾಹ್ನ 3 ಗಂಟೆಗೆ ಶಾಲಾ ಮಕ್ಕಳಿಂದ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಾಯಂಕಾಲ 4 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

ವರದಿ: ಜಗದೀಶ್ ಪೂಜಾರಿ, ಕಡಂದಲೆ

LEAVE A REPLY

Please enter your comment!
Please enter your name here