ದಾವಣಗೆರೆ,:2025-26ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಭಯ ದೂರ ಮಾಡುವ ಮತ್ತು ಮಕ್ಕಳಿಗೆ ಆತ್ಮಸ್ಥೆöÊರ್ಯ ತುಂಬುವ ಪರೀಕ್ಷೆ ಪೂರ್ವಬಾವಿ ತಯಾರಿ ಸಿದ್ಧತಾ ಉಚಿತ ಕಾರ್ಯಾಗಾರ ನಡೆಸಿಕೊಡಲಿದ್ದು ಆಸಕ್ತ ವಿದ್ಯಾಸಂಸ್ಥೆಗಳು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ ಹೆಚ್ಚಿನ ವಿವರ ಪಡೆದು ತಮ್ಮ ತಮ್ಮ ಶಾಲೆಗಳಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಬಹುದಾಗಿದೆ.
ಕಳೆದ 36 ವರ್ಷಗಳಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಗಣ್ಯಮಾನ್ಯರ ಸಮ್ಮುಖದಲ್ಲಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಪ್ರತೀ ವರ್ಷದಂತೆ ಈ ವರ್ಷವೂ ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 125 ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ ‘ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿ ಒಟ್ಟು ಅಂಕ 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ ‘ಸರಸ್ವತಿ ಪುರಸ್ಕಾರ’ ರಾಜ್ಯ ಪ್ರಶಸ್ತಿ ಸೇರಿದಂತೆ ಮಕ್ಕಳಿಗೆ ವಿವಿಧ ಪ್ರಶಸ್ತಿಗಳ ವಿವರ ನೀಡಿ ಅವರನ್ನು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಮಕ್ಕಳು ವ್ಯಾಸಂಗ ಮಾಡಿದ ಸಂಸ್ಥೆಗೆ ಹೆಸರು ತಂದು ಕೊಟ್ಟು ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಮಾನಸಿಕ ಸಿದ್ಧತೆಗಾಗಿ ಹಮ್ಮಿಕೊಳ್ಳಲಾದ ಈ ಕಾರ್ಯಾಗಾರ ಸಂಸ್ಥೆ ಉಚಿತವಾಗಿ ನಡೆಸಿಕೊಡುತ್ತದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, # 588, `ಕನ್ನಡ ಕೃಪ’, ಮೊದಲನೇ ಮಹಡಿ, ಕುವೆಂಪು ರಸ್ತೆ, (ಲಾಯರ್ ರೋಡ್) ಕಸ್ತೂರ್ಬಾ ಬಡಾವಣೆ, ದಾವಣಗೆರೆ – 577002. ಮೊ. 9538732777, 9945785170 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
Home Uncategorized ಕಲಾಕುಂಚದಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪರೀಕ್ಷೆ ಪೂರ್ವಭಾವಿ ಸಿದ್ಥತಾ ತಯಾರಿ ರಾಜ್ಯ ಮಟ್ಟದ ಉಚಿತ ಕಾರ್ಯಾಗಾರ
