ಪುತ್ತೂರು ಅಶೋಕ ಜನ – ಮನ ಕಾರ್ಯಕ್ರಮದ ಅವ್ಯವಸ್ಥೆ 

0
91

ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯಲ್ಲಿ –
“ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧ ಮಾಡಿಲ್ಲ, ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆಯ ಹೆಸರಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಹೇಳಿದರು:

“ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎನ್ನುವುದು ಕೇವಲ ಸಂಘಟನೆಯಲ್ಲ – ಅದು ದೇಶದ ಭೂಮಿಯೊಡನೆ ಬೆಸೆದುಕೊಂಡಿರುವ ರಾಷ್ಟ್ರಭಕ್ತಿಯ ಚಳವಳಿಯಾಗಿದೆ. ರಾಷ್ಟ್ರಪ್ರೇಮ, ಶಿಸ್ತು, ಸೇವಾಭಾವನೆ, ಮತ್ತು ಸಾಮಾಜಿಕ ಸೌಹಾರ್ದತೆಗಳ ಪಾಠವನ್ನು ನೀಡುವ, ನೂರು ವರ್ಷಗಳಿಂದ ದೇಶವನ್ನು ಏಕತೆಯ ಹಾದಿಯಲ್ಲಿ ನಡಿಸುತ್ತಿರುವ ಮಹಾನ್ ಸಂಸ್ಥೆ ಇದು.
ಇಂತಹ ಸಂಸ್ಥೆಯ ಬಗ್ಗೆ ತಪ್ಪು ಅರ್ಥ ಸೃಷ್ಟಿಸಿ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಪ್ರಯತ್ನ ಮಾಡುವುದು – ಇದು ಬರೀ ರಾಜಕೀಯವಲ್ಲ, ಅದು ರಾಷ್ಟ್ರದ ಹಿತದ್ರೋಹ.”

“ಆರ್‌ಎಸ್ಎಸ್ ಎಂದರೆ ಶಿಸ್ತು, ತ್ಯಾಗ ಮತ್ತು ದೇಶಕ್ಕಾಗಿ ಬಾಳುವ ಮನೋಭಾವದ ಸಂಕೇತ. ಸ್ವಯಂ ಸೇವಕರು ಅಂದರೆ ಬಲಿದಾನದ ಪ್ರತೀಕ. ಈ ಸಂಸ್ಥೆ ಮತ, ಜಾತಿ, ಭಾಷಾ ಭೇದಗಳನ್ನು ಮೀರಿ ‘ನಾವು ಎಲ್ಲರೂ ಭಾರತೀಯರು’ ಎಂಬ ಭಾವನೆ ಬೆಳೆಸಿದೆ. ಇಂತಹ ಸಂಸ್ಥೆಯನ್ನು ರಾಜಕೀಯ ಅಸೂಯೆಯಿಂದ ಬಣ್ಣ ಹಚ್ಚುವುದು – ನಿಜವಾದ ರಾಷ್ಟ್ರಪ್ರೇಮಿಗಳ ಗೌರವಕ್ಕೆ ಧಕ್ಕೆಯುಂಟುಮಾಡುವುದು.”

ಅವರು ಮುಂದುವರಿಸಿದರು :

“ಪ್ರತಿಯೊಂದು ಶಾಲೆಯಲ್ಲಿಯೂ, ಪ್ರತಿಯೊಂದು ಸಮಾಜದಲ್ಲಿಯೂ ಶಿಸ್ತು, ಸಂಸ್ಕಾರ ಮತ್ತು ಸೇವೆಯ ಬೀಜ ಬಿತ್ತುವ ಕೆಲಸ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಾಡುತ್ತಿದೆ. ಅದನ್ನು ನಿಷೇಧಿಸುವ ವಿಚಾರ ಯೋಚನೆಯೇ ಹಾಸ್ಯಾಸ್ಪದ. ದೇಶಕ್ಕಾಗಿ ಕೆಲಸಮಾಡುವ ಸಂಸ್ಥೆಯನ್ನು ದುರುದ್ದೇಶದಿಂದ ಚಿತ್ರಿಸುವವರು ರಾಷ್ಟ್ರಭಕ್ತಿಯ ಅರ್ಥವೇ ಅರಿಯದವರು. ಈ ರೀತಿಯ ಹೇಳಿಕೆಗಳು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಸಹನೆಯ ಮತ್ತು ಮತಾಂಧತೆಯ ಪ್ರತೀಕ.”

ಅದೇ ವೇಳೆ ನಿನ್ನೆ ನಡೆದ ಅಶೋಕ್ ಜನಮನ ಕಾರ್ಯಕ್ರಮದ ಅಸಮರ್ಪಕ ಆಯೋಜನೆಯ ಕುರಿತು ಅವರು ಕಳವಳ ವ್ಯಕ್ತಪಡಿಸಿದರು:

“ಮಾನ್ಯ ಅಶೋಕ್ ರೈ ಅವರಿಗೆ 20 ಸಾವಿರ ಜನ ಸೇರುವ ಕಾರ್ಯಕ್ರಮ ಹೇಗೆ ನಡೆಸಬೇಕು ಎನ್ನುವ ಅನುಭವವೇ ಇಲ್ಲವೆನಿಸುತ್ತದೆ. ತಮ್ಮ ಒಣ ಪ್ರತಿಷ್ಠೆ ತೃಪ್ತಿಪಡಿಸಲು ಮುಗ್ದ ಜನರನ್ನು ಬಳಸಿಕೊಂಡದ್ದು ಬಹುದೊಡ್ಡ ಅಪರಾಧ ಇದು ಕ್ಷಮಾರ್ಹವಲ್ಲ. ಮುಖ್ಯಮಂತ್ರಿಯವರನ್ನು ಕರೆಸಿ, ಅವರು ಹೋಗುವ ತನಕ ಜನರಿಗೆ ನೀರು, ಆಹಾರ ಕೊಡದೆ ಒಂದು ರೀತಿಯಲ್ಲಿ ಕೂಡಿ ಹಾಕಿದದ್ದು ದೊಡ್ಡ ನಿರ್ಲಕ್ಷ್ಯ ಮತ್ತು ಮಾನವೀಯತೆಯ ಮೇಲೆ ನಡೆದ ಅವಮಾನ.

ವೇದಿಕೆಯ ಮೇಲೆ ಬಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಅವಹೇಳನ ಮಾಡುವುದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಅಸಂಬದ್ಧ ಆರೋಪ ಮಾಡುವುದು, ಕೋಟ್ಯಂತರ ಜನರ ಜೀವನ ಸುಧಾರಿಸಿದ GST ಕುರಿತು ತಪ್ಪು ಮಾಹಿತಿ ಹರಡುವುದು – ಇವು ರಾಜಕೀಯ ದೌರ್ಬಲ್ಯದ ನಿದರ್ಶನ.”

“ಕಾರ್ಯಕ್ರಮದಲ್ಲಿ ಅಸಮರ್ಪಕ ವ್ಯವಸ್ಥೆಯಿಂದಾಗಿ ಸುಮಾರು 10–11 ಜನರು ಅಸ್ವಸ್ಥಗೊಂಡಿರುವುದು ದುಃಖದ ಸಂಗತಿ. ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾನ್ಯ ಅಶೋಕ್ ಕುಮಾರ್ ರೈ ಅವರೇ, ನೀವು ಸೇವೆಯ ರೂಪದಲ್ಲಿ ಕಾರ್ಯಕ್ರಮವನ್ನು ಮಾಡಲು ಹೊರಟಿದ್ದೀರಾ, ನಿಮಗೆ ಜನರ ಮೇಲೆ ಯಾವುದೇ ಕಾಳಜಿ ಇಲ್ಲ, ಇದರಲ್ಲಿ ನಿಮ್ಮ ರಾಜಕೀಯ ದುರುದ್ದೇಶ ಕಾಣುತ್ತಿದೆ. ಮುಖ್ಯಮಂತ್ರಿ ಮುಂದೆ ಜನ ಸಾಗರ ಕಾಣಬೇಕು ಎನ್ನುವ ದುರುದ್ದೇಶದಿಂದ ಊಟ ನೀರು ಕೊಡದೆ ಉಸಿರಾಡಲು ಸಮಸ್ಯೆ ಉಂಟಾಗಿದ್ದು ಜನರಿಗೆ ಅಸ್ವಸ್ಥತೆ ಉಂಟಾಗಿದೆ. ಇನ್ನು ಮುಂದೆ ನೀವು ಈ ರೀತಿ ಬೇಜವಾಬ್ದಾರಿತನವನ್ನು ಮಾಡಬೇಡಿ. ಇದನ್ನು ಪಾಠವಾಗಿ ಸ್ವೀಕರಿಸಿ.  ಕಾರ್ಯಕ್ರಮಕ್ಕೆ ಜನರನ್ನು ಕರೆದರೆ, ಅವರಿಗೆ ರಕ್ಷಣೆಯನ್ನು ಕೊಡುವ ಜವಾಬ್ದಾರಿಯೂ ನಿಮ್ಮದೇ. ಸಿದ್ದರಾಮಯ್ಯರ ಜೀವದಷ್ಟೇ ಪುತ್ತೂರಿನ ಸಾಮಾನ್ಯ ಜನರ ಜೀವಕ್ಕೂ ಅಷ್ಟೇ ಬೆಲೆ ಇದೆ – ಅದನ್ನೂ ಗೌರವಿಸಬೇಕು.”

ಶಾಸಕರ ಕಚೇರಿ
ಮಂಗಳೂರು 

LEAVE A REPLY

Please enter your comment!
Please enter your name here