ನ. 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

0
125


ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ
ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ.
ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು ಗೋ ಸೇವೆಯ ಮೂಲಕ ಗುರುತಿಸಿಕೊಳ್ಳುವುದಕ್ಕಾಗಿ ಕನ್ನಡ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಕಾಸರಗೋಡು ಗೋ-ಕುಟೀರ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.
ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವುದಕ್ಕಾಗಿ ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಕಾಸರಗೋಡು ಗೋ- ಕುಟೀರವನ್ನು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ಸಾರ್ವಜನಿಕರು ಗೋ-ಭಕ್ತರ ಸಹಕಾರದಿಂದ ಬ್ರಹತ್ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನ ನೀಡಿ ಪೂಜಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು.
ಗೋ ಪೂಜೆಯಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ,ಬೆಲ್ಲ,ಹಣ್ಣು ಮುಂತಾದ ಗೋಗ್ರಾಸ ನೀಡಿ ಗೋ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನಡೆಸಲಾಗುವುದು .
ಕಾಸರಗೋಡು ಗೋ- ಕುಟೀರ ನಿರ್ಮಾಣದ ಭೂಮಿಯಲ್ಲಿ ಗೋ- ಸಂಕಲ್ಪವನ್ನು ನಡೆಸಲಾಯಿತು.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು- ಗೋ- ಕುಟೀರದ ಕಾರ್ಯ ಯೋಜನೆಗಳನ್ನು ಪ್ರಾಸ್ತಾಪಿಸಿದರು. ಕಾಸರಗೋಡು ನಗರಸಭೆಯ ಕೌನ್ಸಿಲರ್ ಶ್ರೀಮತಿ ಶಾರದಾ ಬಿ.ಅಧ್ಯಕ್ಷತೆ ವಹಿಸಿದ್ದರು. ಡಾ.ಕೆ ಎನ್. ವೆಂಕಟ್ರಮಣ ಹೊಳ್ಳ, ಜಯಾನಂದ ಕುಮಾರ್ ಹೊಸದುರ್ಗ, ಕೆ ಗುರುಪ್ರಸಾದ ಕೋಟೆಕಣೆ,ಶ್ರೀಕಾಂತ ಕಾಸರಗೋಡು, ಕೆ. ಮುರಳೀಧರ ಪಾರೆಕಟ್ಟೆ, ಕೆ ನಿರಂಜನ ಕೊರಕ್ಕೋಡು, ಯೋಗೀಶ್ ಕೋಟೆಕಣೆ, ನಾರಾಯಣ ನಾಯ್ಕ್ ಪೆರ್ನೆ, ಕಿಶೋರ್ ಕುಮಾರ್ ಕೆ,ಕುಶಲ ಕುಮಾರ ಕೆ.ಕನ್ನಡ ಗ್ರಾಮ,ರಾಧ ಶಿವರಾಮ, ಸವಿತಾ ಕಿಶೋರ್ ಕುಮಾರ್, ಕೆ ಜಗದೀಶ ಕೂಡ್ಲು, ಶ್ವೇತಾ ಯೋಗೀಶ್ ಕೋಟೆಕಣಿ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here