ಮುಡಿಪು: ಪೂಜ್ಯ ಖಾವಂದರ 58 ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

0
61

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ನೇ ಪಟ್ಟಭಿಷೇಕದ ವರ್ಧಂತ್ಸುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ
ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮುಡಿಪು ವಲಯ ಮತ್ತು ಶ್ರೀ ಭಾರತಿ ಹಿರಿಯ ಪ್ರಾಥಾಮಿಕ ಶಾಲೆ ಮುಡಿಪು ಇದರ ಸಹಕಾರದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಮತ್ತು ಮಾತೃ ಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ
ಉಚಿತ ಆರೋಗ್ಯ ತಪಸಣಾ ಶಿಬಿರ ಆಯೋಜನೆ ಮಾಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಪ್ರೇಮ ಗಟ್ಟಿ ವಹಿಸಿದ್ದರು.ಉದ್ಘಾಟನೆಯನ್ನು ಸಂತೋಷ್ ಕುಮಾರ್ ರೈ ಬೋಳಿಯಾರ್ ನೆರವೇರಿಸಿ ಪೂಜ್ಯ ಖಾವಂದರ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕ್ಷೇತ್ರದ ಮೂಲಕ ನಡೆಸುವ ಸಾಮಾಜಿಕ ಕಾರ್ಯಕ್ರಮಗಳು ಇಂದು ರಾಷ್ಟ್ರ ಮಟ್ಟದಲ್ಲಿ ಹೆಸರು ಪಡೆದಿದೆ ಎಂದು ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಸುರೇಶ್ ಸರ್ ರವರು ಅರೋಗ್ಯ ತಪಾಸಣಾ ಶಿಬಿರ ನಡೆಸುವ ಉದ್ದೇಶ ಹಾಗೂ ಇದರ ಪ್ರಯೋಜನಗಳ ಬಗ್ಗೆ, ಯೋಜನೆಯ ಮೂಲಕ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. Dr ಆಫಸಲ್ ರವರು ಅರೋಗ್ಯ ತಪಾಸಣಾ ಶಿಬಿರಾದ ಸದುಪಯೋಗ ಪಡೆಯಲು ತಿಳಿಸಿ ಇತ್ತಿಚಿನ ದಿನಗಳಲ್ಲಿ ಅರೋಗ್ಯ ಸಮಸ್ಯೆ ಅತಿ ಹೆಚ್ಚು ಕಂಡು ಬರುತಿದ್ದು ಇದಕ್ಕೆ ತಪಾಸಣೆ ಅವಶ್ಯಕತೆ ಇದೆ ಎಂದು ತಿಳಿಸಿದರು. ಸುಬ್ರಮಣ್ಯ ಭಟ್ (ಸಂಚಾಲಕರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಮುಡಿಪು) ನವೀನ್ ಚಂದ್ರ (ಅಧ್ಯಕ್ಷರು ಪ್ರಗತಿಬಂಧು ಸ್ವ ಸಹಾಯ ಸಂಘ ಕೇಂದ್ರ ಒಕ್ಕೂಟ) ನವೀನ್ ಪಾದಲ್ಪಡಿ ( ಜನಜಾಗೃತಿ ಸದಸ್ಯರು ಮುಡಿಪು ವಲಯ ) ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಪ್ರೇಮ ಗಟ್ಟಿ ಶುಭ ಹಾರೈಸಿದರು. ಕಾರ್ಯಕ್ರಮದ ನಿರೂಪಣೆ ಸೇವಾಪ್ರತಿನಿಧಿ ಶಕೀಲಾ, ಸ್ವಾಗತ ವಿನೋದ್ ಬಂಗೇರ ಪಜೀರ್ ಒಕ್ಕೂಟ ಅಧ್ಯಕ್ಷರು, ವಲಯ ಮೇಲ್ವಿಚಾರಕಿ ಪ್ರೇಮಲತಾ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here