ಮಂಗಳೂರು ವಿವಿ: ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದಿಂದ ನಾಯಕತ್ವ ಕುರಿತ ಕಾರ್ಯಗಾರ

0
37

ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರವು ರಾಮಕೃಷ್ಣ ಮಿಷನ್, ಮಂಗಳೂರು ಸಹಕಾರದೊಂದಿಗೆ ಮತ್ತು ವಾಣಿಜ್ಯ ವಿಭಾಗದ ಸಹಭಾಗಿತ್ವದೊಂದಿಗೆ ನಾಯಕತ್ವ ಕುರಿತು ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಂಡಿತು.

ಕಾರ್ಯಗಾರದ ಉದ್ಘಾಟನೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪ್ರೀತಿ ಕೀರ್ತಿ ಡಿಸೋಜ ನೆರವೇರಿಸಿದರು. ಸ್ವಾಮಿ ವಿವೇಕಾನಂದ ಸ್ಕೂಲ್ ಆಫ್ ವ್ಯಾಲ್ಯೂಸ್ ನ ತರಬೇತುದಾರರಾದ ಅರವಿಂದ ಸೀತಾನದಿ ಮತ್ತು ಡಾ. ರಾಯಲ್ ತೋನ್ಸೆ ಗಣೇಶ್ ಮಾಹಿತಿ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರಾಮಕೃಷ್ಣ ಮಿಷನ್ ಯೂತ್ ಕೋ-ಆರ್ಡಿನೇಟರ್ ಸಜಿತ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಡಾ. ದಿನಕರ ಕೆಂಜೂರು, ಡಾ. ರಮ್ಯ ಕೆ. ಆರ್. ವೈಶಾಲಿ ಕೆ. ಮತ್ತು ಸಿ. ಲಹರಿ ಹಾಜರಿದ್ದರು.
ಡಾ. ಚಂದ್ರು ಹೆಗಡೆ ಸ್ವಾಗತಿಸಿದರು. ಮೋಕ್ಷಿತ ಎಂ. ಮತ್ತು ತಂಡದವರು ಪ್ರಾರ್ಥಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

LEAVE A REPLY

Please enter your comment!
Please enter your name here