ಉಡುಪಿಯ ಗೀತಾ ಮಂದಿರದಲ್ಲಿ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದ ಭವ್ಯ ಉದ್ಘಾಟನೆ

0
24

ಉಡುಪಿ: ಗೀತಾ ಮಂದಿರದಲ್ಲಿ ಶ್ರೀ ಪುತ್ತಿಗೆ ನೃಸಿಂಹ ಸಭಾಭವನವನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ನಂತರ ಸ್ವಾಮೀಜಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ನಂತರ ಗೀತಾ ಮಂದಿರದಲ್ಲಿ ನೂತನ ಸಭಾಭವನವನ್ನು ಉದ್ಘಾಟಿಸಿದರು. ನಂತರ ಸುತ್ತೂರು ಶ್ರೀಗಳಿಗೆ ಮಠದ ವತಿಯಿಂದ ಸಂಸ್ಥಾನ ಗೌರವಸಲ್ಲಿಸಲಾಯಿತು. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಶ್ರೀಕೃಷ್ಣಾನುಗೃಹ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಒಡಿಶಾ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಮಹಿತೋಷ್ ಆಚಾರ್ಯ ಸ್ವಾಗತಿಸಿ, ಡಾ l ಬಿ. ಗೋಪಾಲಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here