ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ ಇವರ ವತಿಯಿಂದ, ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ , ಹೆಬ್ರಿ ವೃತ್ತ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ಅಮೃತ ಭಾರತಿ ಕ್ರೀಡಾಂಗಣದಲ್ಲಿ ನಡೆಯಿತು . ಅಮೃತ ಭಾರತಿ ಟ್ರಸ್ಟ್ ನ ವಿಶ್ವಸ್ಥರಾದ ಭಾಸ್ಕರ್ ಜೋಯಿಸ್ ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಆಶಾಲತಾ ಅವರು ಕ್ರೀಡಾ ಧ್ವಜಾರೋಹಣಗೈದರು . ಹೆಬ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಪ್ರೀಯಾ ರವರು ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಹೆಬ್ರಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಂಕರ್ ಶೇರಿಗಾರ್ ಅವರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ,ವ ಕ್ರೀಡೆ ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು .
ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಅಮೃತ ಭಾರತಿ ಟ್ರಸ್ಟ್ ನ ಸದಸ್ಯರಾದ ಬಾಲಕೃಷ್ಣ ಮಲ್ಯ ಅವರು ಮಾತನಾಡಿ, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ . ಆ ನಿಟ್ಟಿನಲ್ಲಿ ಅಮೃತ ಭಾರತಿ ಪಠ್ಯಪೂರಕ ಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದರು.
ಪಾಂಡುರಂಗ ಸುಮನಾಯಕ್ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶೈಲೇಶ್ ಕಿಣಿ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ ನಾಯಕ್, ಹಾಸ್ಟೆಲ್ ಕಮಿಟಿಯ ಸದಸ್ಯರಾದ ರಾಮಕೃಷ್ಣ ಆಚಾರ್ಯ, ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕಾರ್ಕಳ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ರಮಾನಂದ ಶೆಟ್ಟಿ, ಹೆಬ್ರಿ ವೃತ್ತದ ಸಿ ಆರ್ ಪಿ ಶ್ರೀಮತಿ ಪುಷ್ಪ, ಶಿವಪುರ ಕ್ಲಸ್ಟರ್ ಸಿ ಅರ್ ಪಿ ಪ್ರೀತೇಶ್ ಶೆಟ್ಟಿ , ಸಂಸ್ಥೆಯ ಮುಖ್ಯಸ್ಥರಾದ ಶಕುಂತಲಾ , ಅಪರ್ಣ ಆಚಾರ್, ಪ್ರಕಾಶ್ ಜೋಗಿ, ಅರುಣ್ , ಅನಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿ , ಮುಖ್ಯೋಪಾಧ್ಯಾಯಿನಿ ಶಕುಂತಳಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ವಂದಿಸಿದರು.
ಹೆರ್ಗ ವಿಠ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡರು.

