ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ನವಂಬರ್ ಒಂದರAದು ಶನಿವಾರ ಬೆಳಿಗ್ಗೆ 8 ಗಂಟೆಗೆ 70ನೇ ವರ್ಷದ ಕನ್ನಡದ ಪ್ರಯುಕ್ತ ಕಲಾಕುಂಚ ಕಛೇರಿ ಹೊರಾಂಗಣದಲ್ಲಿ ಕನ್ನಡದ ಬಾವುಟದ ಧ್ವಜಾರೋಹಣ ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಭರತ್ ಚನ್ನಗಿರಿಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ ಹಾಗೂ ಕಲಾಕುಂಚ ವಿವಿಧ ಬಡಾವಣೆಗಳ ಶಾಖೆಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಸರ್ವ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಸರ್ವ ಕನ್ನಡ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

