ವರದಿ÷ ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ
ಶಿವಮೊಗ್ಗ: ಇಂದು ನಡೆದ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಇಂದು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷರ ಚುನಾವಣೆಯಲ್ಲಿ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ದೇವರಾಜ್ ಇವರು ನಾಮಪತ್ರ ಹಿಂದಕ್ಕೆ ಪಡೆದುಕೊಂಡರು. ಅಲ್ಲದೆ ಇವರ ನೇತೃತ್ವದಲ್ಲಿ ಸ್ಪರ್ಧೆ ಮಾಡಿದ್ದ ತಿರುಪ್ಪಯ್ಯ ಇವರು ಸಹಾ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಬಲ್ಕೀಶ್ ಬಾನು ಹಾಗೂ ತಿರುಪ್ಪಯ್ಯ ಇವರನ್ನು ಶಿವಮೊಗ್ಗ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಆರ್ ಎಂ ಮಂಜುನಾಥಗೌಡ, ಉಪಾಧ್ಯಕ್ಷ ಮರಿಯಪ್ಪ ಹಾಗೂ ನಿರ್ದೇಶಕ ಎಂ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಅಭಿನಂದಿಸಿದ್ದಾರೆ. ಮತ್ತು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

