ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ಮಾಡಿ ಕೇಂದ್ರ ದ ಹಾಜರಾತಿ, ಸ್ವ ಉದ್ಯೋಗ , ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಮಲ್ಲಿಗೆ ಕೃಷಿಕಾರದ ಝನಲ್ಡ ಡಿ ಸೋಜಾರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ, ವಲಯ ಮೇಲ್ವಿಚಾರಕರಾದ ಚಂದ್ರಶೇಖರ, ತಾಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

