ಸುರತ್ಕಲ್ ಚೂರಿ ಇರಿತ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ ಗುರುರಾಜ್

0
136

ಸುರತ್ಕಲ್: ಚೂರಿ ಇರಿತ ಪ್ರಕರಣ ಪ್ರಮುಖ ಆರೋಪಿಯಾಗಿರುವ ಗುರುರಾಜ್ ಅರೆಸ್ಟ್ ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕುರಿತಂತೆ ಪ್ರಕರಣ ದಾಖಲಾಗಿದೆ. ಸುರತ್ಕಲ್ ನ ದೀಪಕ್ ಬಾರ್ ಸಮೀಪ ಅಕ್ಟೋಬರ್ 23 ರಂದು ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಮ್ ಎಂಬವರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,‌ ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ತಲೆಮರೆಸಿಕೊಂಡಿರುವ ಗುರುರಾಜ್ ಆಚಾರಿ ಅವರನ್ನು ಅರೆಸ್ಟ್ ಮಾಡಲು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಆರೋಪಿ ಕುಳಾಯಿ ಗ್ರಾಮದ ಕುಳಾಯಿ ಗುಡ್ಡೆ ಪ್ರಗತಿ ನಗರದ ಬಳಿ ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆ ಪೊಲೀಸರು ಸಿಬ್ಬಂದಿಗಳ ಜೊತೆ ಅಕ್ಟೋೂಬರ್ 25 ರಂದು ಮಾಹಿತಿ ಬಂದ ಸ್ಥಳವಾದ ಕುಳಾಯಿ ಗುಡ್ಡೆ ಬಳಿ ಹೊನ್ನಕಟ್ಟೆಯಿಂದ ಕಾನಾ ಕಡೆಗೆ ಹೋಗುವ ರಸ್ತೆಯಲ್ಲಿ ಪ್ರಗತಿ ನಗರದ ಬಳಿ ಹೋಗಿದ್ದಾರೆ.

LEAVE A REPLY

Please enter your comment!
Please enter your name here