ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತೃತೀಯ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಬೆಸೆಂಟ್ ಪದವಿಪೂರ್ವ ಕಾಲೇಜು , ಮಂಗಳೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್
ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಭಾಗವಹಿಸಿ ತೃತೀಯ ಸ್ಥಾನ ಪಡೆಯಿತು. ಈ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ
ಹೇಮಂತ್ ಆರ್ ಗೌಡ, ಕೆ.ವೈಭವ್ ರೈ , ಮನೀಶ್ ಡಿ.ವಿ, ಅಜಯ್ ಎಸ್.ಕೆ , ಪ್ರಥಮ ವಿಜ್ಞಾನ ವಿಭಾಗದ ಚ್ಯವನ್.ಕೆ ಭಾಗವಹಿಸಿರುತ್ತಾರೆ. ವಿದ್ಯಾರ್ಥಿಗಳು ಕಾಲೇಜಿನ
ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪಸನ್ಯಾಸಕೇತರ ವೃಂದದವರು ಅಭಿನದಿಸಿರುತ್ತಾರೆ.

