ವರದಿ ರಾಯಿ ರಾಜ ಕುಮಾರ
ಬಿಜೆಪಿ ಮುಲ್ಕಿ ಮೂಡುಬಿದರೆ ಕ್ಷೇತ್ರದ ಕಿನ್ನಿಗೋಳಿ, ಮುಲ್ಕಿ, ಹಳೆಯಂಗಡಿ, ತೋಕೂರು, ಇತ್ಯಾದಿ ಪ್ರದೇಶಗಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಮುಖ್ಯಸ್ಥರಿಗೆ ಹಾಗೂ ಪ್ರಮುಖರಿಗೆ ತರಬೇತಿ ಕಾರ್ಯಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಅಕ್ಟೋಬರ್ 29ರಂದು ನಡೆಯಿತು.

ತರಬೇತಿಯಲ್ಲಿ ಮಾರ್ಗದರ್ಶಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸುನಿಲ್ ಆಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಪ್ರಮುಖರು,, ಪುರಸಭೆ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಈ ಸಂದರ್ಭದಲ್ಲಿ ತರಬೇತಿಗೆ ಹಾಜರಾಗಿದ್ದರು.


