ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ವತಿಯಿಂದ, ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕುಮಾರಿ ಅಪೂರ್ವ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಕುಮಾರಿ ಉತ್ರಿಕಾ ದ್ವಿತೀಯ ಸ್ಥಾನ ಗಳಿಸಿ ಇಬ್ಬರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಅಡಳಿತ ಮಂಡಳಿ ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

