ಹಾಸನ: ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸಿ ಕ್ಯಾಬ್ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

