ಕಡೇಶಿವಾಲಯ ಸರಕಾರಿ ಪ್ರೌಢಶಾಲಾ ನೇತೃತ್ವದಲ್ಲಿ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ – 2025

0
55

ಕ್ರೀಡೆಗಳು ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿಯಾಗಿದೆ.. ಮಂಜುನಾಥನ್ ಎಂ ಜಿ

ಕಲ್ಲಡ್ಕ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ತರಗತಿ ಕೋಣೆಯ ಒಳಗೆ ಮತ್ತು ಹೊರಗೆ ಪಡೆದ ಶಿಕ್ಷಣ ದೊರೆತಾಗ ಮಾತ್ರ ವಿದ್ಯಾರ್ಥಿಗಳ ಜೀವನ ಮಟ್ಟದಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು.

ಅವರು ಅಕ್ಟೋಬರ್ 30 ಗೂರುವಾರದಂದು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ,ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ನೇತೃತ್ವದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಮಾಣಿ ಇದರ ಸಹಕಾರದೊಂದಿಗೆ ನಡೆದ 16 ರಿಂದ 17 ರಾ ವಯೋಮಾನದ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ – 2025 ನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯಲ್ಲಿ ಕ್ರೀಡಾಕೂಟದ ಧ್ವಜಾರೋಹಣ ಮಾಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್ ಪತಸಂಚಲನದ ಗೌರವಂದನೆ ಸ್ವೀಕರಿಸಿ ಕಡೇಶಿವಾಲಯದಲ್ಲಿ ವಲಯ ಮಟ್ಟದ ಕ್ರೀಡಾಕೂಟ ಮಾಡಲು ಬೇಕಾದ ಆಟದ ಕ್ರೀಡಾಂಗಣ ಇಲ್ಲದ ಕಾರಣ ಮಾಣಿ ಬಾಲವಿಕಾಸ ಶಾಲಾ ಸಹಕಾರದೊಂದಿಗೆ ಈ ಕ್ರೀಡಾಂಗಣದಲ್ಲಿ ಸ್ಪರ್ಧೆಗಳನ್ನು ನಡೆಸುತ್ತಿದ್ದು ಎಲ್ಲರ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ವಿಯಾಗಲಿ ಅಂದರು.

ಮಾಣಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಪ್ರಹ್ಲಾದ ಜಿ ಶೆಟ್ಟಿ ಕ್ರೀಡಾ ಜೊತಿ ಸ್ವೀಕರಿಸಿ ದೀಪ ಪ್ರಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿದ್ಯಾರ್ಥಿ ಕುಮಾರಿ ಸಾನ್ವಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು

ಕ್ರೀಡಾಕೂಟದ ನೇತೃತ್ವ ವಹಿಸಿದ್ದ ಕಡೇಶಿವಾಲಯ ಸರಕಾರಿ ಪ್ರೌಢ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಲಾಖ ವತಿಯಿಂದ ಪ್ರಶಂಶಣ ಪತ್ರ ನೀಡಿದರು.
ಕ್ರೀಡಾ ಕೂಟ ನಡೆಸಲು ಸ್ಥಳಾವಕಾಶ ಒದಗಿಸಿ ಕೊಟ್ಟ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರನ್ನು ಕಡೇಶಿವಾಲಯ ಶಾಲಾ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕೆ, ಸದಸ್ಯರುಗಳಾದ ಶೀನ ನಾಯ್ಕ , ಪ್ರಮೀಳಾ, ವಶೀತ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಂದರ ಪೂಜಾರಿ, ಸದಸ್ಯರಾದ ಗಿರಿಯಪ್ಪ ಗೌಡ, ಮಾಣಿ ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಕ್ಲಸ್ಟರಿನ ಸಿ ಆರ್ ಪಿ ಗಳಾದ ಸುಧಾಕರ್ ಭಟ್, ಜ್ಯೋತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ, ಕಾರ್ಯದರ್ಶಿ ಸಂಪತ್, ನಿವೃತ್ತ ದೈಹಿಕ ಶಿಕ್ಷಕ ಶಂಕರ್, ಕಲ್ಲಡ್ಕ ವಲಯ ಕ್ರೀಡಾಕೂಟ ನೋಡಲ್ ಅಧಿಕಾರಿ ಜಗದೀಶ್, ಸಹ ನೋಡಲ್ ಪ್ರಕಾಶ್ ಟಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಭಾಸ್ಕರ್ ನಾಯ್ಕ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ದೈಹಿಕ ಶಿಕ್ಷಕ ದಿನಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಹರ್ಷಿತ್ ಜಿ ಪ್ರಾರ್ಥಿಸಿ, ಕಡೇಶಿವಾಲಯ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಲೋಕನಂದ ಎನ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಚೇತನ ವಾಣಿ ವಂದಿಸಿದರು. ಸಹ ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಮಾಣಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಕ್ರೀಡಾಕೂಟಕೆ ಪ್ರಥಮ ಚಿಕಿಸ್ತೆ ವ್ಯವಸ್ಥೆ ಕಲ್ಪಿಸಿದ್ದರು.

LEAVE A REPLY

Please enter your comment!
Please enter your name here