ಹೆಬ್ರಿ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಪದವಿಪೂರ್ವ ವಿದ್ಯಾರ್ಥಿಗಳಿಗೆ ಸೈಬರ್ ಸೆಕ್ಯೂರಿಟಿ ಅವಾರ್ನೆಸ್ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್. ಆರ್. ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ಮಾರಾಳಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಪರೀಕ್ಷಿತ್ ಅವರಿಗೆ ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ಅವರು ಪ್ರಶಸ್ತಿಯನ್ನು ವಿತರಿಸಿದರು.
ಪ್ರತಿಭಾವಂತ ವಿದ್ಯಾರ್ಥಿಯಾದ ಪರೀಕ್ಷಿತ್ ಆಚಾರ್ಯ ಮಾರಾಳಿಯ ಮಂದಾರ ಆಚಾರ್ಯ ವೀಣಾ ದಂಪತಿಯ ಸುಪುತ್ರ.
ವಿಜೇತ ವಿದ್ಯಾರ್ಥಿಯನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ. 

